ನಿಮಗೆ ಒದಗಿಸಬೇಕಾದ / ಒದಗಿಸಲಾದ ಕರ್ನಾಟಕ ಸರ್ಕಾರದ ಸೇವೆ / ಯೋಜನೆಯ ಬಗ್ಗೆ ಕುಂದುಕೊರತೆ ಏನಾದರು ಇದ್ದಲ್ಲಿ ಇಲ್ಲಿ ನೋಂದಾಯಿಸಿ Grivience / 1902 ಗೆ ಕರೆ ಮಾಡಿ.

ಇತ್ತಿಚಿನ ಕಾರ್ಯಕ್ರಮಗಳು
 • ಕೋವಿಡ್‌ ನಿಯಂತ್ರಣಕ್ಕೆ ಅಧಿಕಾರಿಗಳೊಂದಿಗೆ ಮಾನ್ಯ ಮುಖ್ಯಮಂತ್ರಿ ಸಭೆ

  ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಎಸ್.ಬೊಮ್ಮಾಯಿ ಅವರು ಇಂದು ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಿಬಿಎಂಪಿ ಸೇರಿದಂತೆ ಬೆಂಗಳೂರು ನಗರ ಜಿಲ್ಲೆ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮೈಸೂರು - ಈ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು. ಸಚಿವರಾದ ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಆರೋಗ್ಯ ಇಲಾಖೆ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಆಯುಕ್ತ ರಂದೀಪ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 • ಕೆಆರ್‌ಐಡಿಎಲ್‌ ನಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ. 5ಕೋಟಿ ದೇಣಿಗೆ

  ಕರ್ನಾಟಕ ಗ್ರಾಮೀಣ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.ಗಳ ದೇಣಿಗೆಯ ಚೆಕ್ ಅನ್ನು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರಿಗೆ ಇಂದು ಸಲ್ಲಿಸಲಾಯಿತು. ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೆ.ಆರ್.ಐ.ಡಿ.ಸಿ.ಎಲ್ ಅಧ್ಯಕ್ಷ ರುದ್ರೇಶ್, ಮುಖ್ಯಮಂತ್ರಿಗಳ ಪ್ರಧಾನಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 • “ಸಂವಿಧಾನ ಕರ್ತೃಗಳನ್ನು ಸ್ಮರಿಸೋಣ”

  "1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಅಂದಿನ ಸಂವಿಧಾನ ಸಭೆ ಅಂಗೀಕರಿಸಿತು. ನಮ್ಮ ಸಂವಿಧಾನದ ಸದಾಶಯಗಳನ್ನು ಸಂರಕ್ಷಿಸುವ ಹಾಗೂ ಪಾಲಿಸುವ ದೃಢನಿಶ್ಚಯದೊಂದಿಗೆ ನಮ್ಮ ಎಲ್ಲ ಸಂವಿಧಾನ ಕರ್ತೃಗಳನ್ನು ಸ್ಮರಿಸೋಣ, ಸಂವಿಧಾನಕ್ಕೆ ಸದಾ ಬದ್ಧರಾಗಿರುವ ಸಂಕಲ್ಪವನ್ನು ಪುನರುಚ್ಛರಿಸೋಣ" : ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ.

 • ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.ಗಳ ದೇಣಿಗೆ

  ಹಟ್ಟಿ ಚಿನ್ನದ ಕಂಪನಿ ನಿಯಮಿತದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.ಗಳ ದೇಣಿಗೆಯ ಚೆಕ್ ಅನ್ನು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರಿಗೆ ಇಂದು ಹಸ್ತಾಂತರ ಮಾಡಲಾಯಿತು. ಗಣಿ ಮತ್ತು ಭೂ ವಿಜ್ಞಾನ ಸಚಿವ ಆಚಾರ್ ಹಾಲಪ್ಪ ಬಸಪ್ಪ, ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಮಾನಪ್ಪ.ಡಿ.ವಜ್ಜಲ್, ಸಂಸ್ಥೆಯ ನಿರ್ದೇಶಕರು ಮತ್ತಿತರರು ಉಪಸ್ಥಿತರಿದ್ದರು.

 • ವೈದ್ಯಕೀಯ ಉಪಕರಣಗಳ ಪ್ರಾತ್ಯಕ್ಷಿಕೆ

  ಪಾರ್ಶ್ವವಾಯುವಿಗೆ ಸಂಬಂಧಿಸಿದಂತೆ ಹೃದಯ ರಕ್ತನಾಳ ಚಿಕಿತ್ಸೆಗೆ ಉನ್ನತ ತಂತ್ರಜ್ಞಾನವುಳ್ಳ ವೈದ್ಯಕೀಯ ಉಪಕರಣಗಳ ಕುರಿತ ಪ್ರಾತ್ಯಕ್ಷಿಕೆಯನ್ನು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಇಂದು ವೀಕ್ಷಿಸಿದರು. ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ|| ಕೆ.ಸುಧಾಕರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

 • ರಾಷ್ಟ್ರೀಯ ಬುದ್ಧ ಧಮ್ಮ ಅಧಿವೇಶನವನ್ನು ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು

  72ನೇ ಸಂವಿಧಾನ ದಿನಾಚರಣೆ ಅಂಗವಾಗಿ ಗುರುವಾರ ನಾಗಸೇನ ಬುದ್ಧ ವಿಹಾರದಲ್ಲಿ ವಿಶ್ವ ಬುದ್ಧ ಧಮ್ಮ ಸಂಘ ಆಯೋಜಿಸಿದ್ದ ರಾಷ್ಟ್ರೀಯ ಬುದ್ಧ ಧಮ್ಮ ಅಧಿವೇಶನವನ್ನು ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

 • ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಮಧ್ಯಾಹ್ನದ ಊಟಕ್ಕೆ ಮೊಟ್ಟೆ/ಬಾಳೆಹಣ್ಣುಗಳನ್ನು ನೀಡುತ್ತಿದೆ

  ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಗಳನ್ನು ಪರಿಚಯಿಸುವ ಯೋಜನೆಯನ್ನು ಬುಧವಾರ ಪ್ರಕಟಿಸಿದೆ. ಉತ್ತರ ಕರ್ನಾಟಕದ ಏಳು ಜಿಲ್ಲೆಗಳಾದ ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ ಮತ್ತು ವಿಜಯಪುರದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಮಧ್ಯಾಹ್ನದ ಊಟಕ್ಕೆ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಮೊಟ್ಟೆಗಳನ್ನು ಸೇವಿಸದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ನೀಡಲಾಗುವುದು.

 • ಭಾರಿ ಮಳೆ: ಮಾನ್ಯ ಮುಖ್ಯಂತ್ರಿ ಶ್ರೀ ಬಸವರಾಜ್‌ ಬೊಮ್ಮಾಯಿ ರೂ. 10,000 ಪರಿಹಾರ ಘೋಷಣೆ

  ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಮಂಗಳವಾರ (ನ. 23) ರೂ. ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದವರಿಗೆ 10,000 ಪರಿಹಾರ ಘೋಷಣೆ ಮಾಡಿದ್ದಾರೆ. ಯಲಹಂಕದಲ್ಲಿ ಜಲಾವೃತಗೊಂಡಿರುವ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ಗೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

 • ಜನವರಿ ವೇಳೆಗೆ ರಾಜಕಾಲುವೆ ಅಗಲೀಕರಣ

  ಮಾನ್ಯಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಬೆಂಗಳೂರಿನ 30 ಕಿ.ಮೀ ರಾಜಕಾಲುವೆಗಳ (ಪ್ರಮುಖ ಮಳೆನೀರು ಚರಂಡಿ) ಕಾಮಗಾರಿಯನ್ನು 2022ರ ಜನವರಿ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಗರದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವುದನ್ನು ತಪ್ಪಿಸಲು ರಾಜಕಾಲುವೆಗಳ ಅಗಲೀಕರಣ ಮತ್ತು ದುರಸ್ತಿ, ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡುವುದು ರಾಜಕಾಲುವೆಗಳ ಅಗಲೀಕರಣದ ಉದ್ದೇಶವಾಗಿದೆ ಎಂದರು.

ಕರ್ನಾಟಕದ ಒಂದು ಪಕ್ಷಿ ನೋಟ
Karnataka_map_latest
ರಾಜಧಾನಿ ಬೆಂಗಳೂರು
ವಿಸ್ತೀರ್ಣ 191,791 ಚ.ಕಿ.ಮಿ
ಜಿಲ್ಲೆಗಳು 31
ಜನಸಂಖ್ಯೆ 61,095,297
ಸಾಕ್ಷರತೆ 75.36 %
(ಕ್ಲಿಕ್ ಮಾಡಿ )

ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
 • ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ.

 • ಸ್ಥಿರಚಿತ್ರಣ : 1280x800 to 1920x1080

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ |ಕನ್ನಡ ಮತ್ತು ಸಂಸ್ಕೃತ ಇಲಾಖೆ| ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ

ಸಹಾಯ, ಸಲಹೆಗಳು ಮತ್ತು ದೂರುಗಳಿಗೆ ಸಂಪರ್ಕಿಸಿ: ಯೋಜನಾ ನಿರ್ದೇಶಕರು, ಜಾಲತಾಣ ವಿಭಾಗ, ಇ-ಆಡಳಿತ ಕೇಂದ್ರ, ಶಾಂತಿನಗರ, ಬೆಂಗಳೂರು ದೂರವಾಣಿ : 080-22230060 | ಇ-ಮೇಲ್ : pd.webportal@karnataka.gov.in

ವಿನ್ಯಾಸ , ಅಭಿವೃದ್ಧಿ ಮತ್ತು ಹೋಸ್ಟಿಂಗ್: cegಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ
 • Meity_logo
 • digital
 • data
 • India
 • pm
 • gigw
 • wcag
 • ssl
 • w3c
 • kp_kn